← ಶ್ರೀಕೃಷ್ಣ

ಧನ್ಯನೋ ಶೇಷಗಿರಿದಾಸ ನೀನೂ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಧನ್ಯನೋ ಶೇಷಗಿರಿದಾಸ ನೀನೂ
ಪುಣ್ಯವಂತನು ಅಹುದೊ ಮನೊ ವಾಚದಲಿ ನಿತ್ಯ

ಮುಂಗೈಯ ಮ್ಯಾಲಿನ ಗಿಳಿ ಹಾರಿಹೋದಂತೆ
ರಂಗ ಮಧ್ವನ ಸ್ಮರಣೆ ಮಾಡಿಕೊಳುತ
ಮಂಗಳಾಂಗನಾಗಿ ಸ್ವರ್ಗಸ್ಥನಾದಿ ಕ್ಷಣ
ಭಂಗುರವೆಂಬ ಪ್ರಮಾಣ ಸಿದ್ಧಿಸಿತು ಗಡ ||1||

ಸತ್‍ಶಿಷ್ಯನೆಂದೆನಿಸಿಕೊಂಡದಕೆ ಎನ್ನ ಮ
ನೋತ್ಸಾಹ ಮಾತ್ರ ಬಂದಾಗಲಿಲ್ಲಾ
ವತ್ಸ ಕೇಳು ಉಪಸರ್ಗ ಕೂಡಿದ ನಾಭಿ
ತತ್ಸಮಾನಾಯಿತೊ ಇಂದಿನಾರಭ್ಯವೂ||2||

ಒಂದೆ ಪ್ರವಾಹದೊಳು ಈಸು ಬೀಳಲು ಸುಳಿ
ಯಿಂದ ಹಿಂದಕೆ ಒಬ್ಬನಿಂದಂತೇವೆ
ಇಂದು ಎನಗಾಯಿತೊ ಭೂಮಿಯೊಳಗೆ ಋಣಾನು-
ಬಂಧ ಇಂತಿರಲಿಕ್ಕೆ ಯತ್ನ ಒಬ್ಬರದಿಲ್ಲ||3||

ಪರಿಣಾಮಕೆ ನಿನಗೆ ಸಾನುಕೂಲಾವಾಗಿ
ಅನಿಲದೇವನು ಒಲಿದು ಹರಿಯ ಕೂಡಾ
ಪ್ರಣಮಪೂರ್ವಕದಿಂದ ಪಂಚತ್ವ ಐದಿದೆ ಸಾ-
ಧನ ಪೂರ್ತಿಕಾಲ ಎಳ್ಳನಿತು ಉಳದಿಪ್ಪದೊ ||4||

ವಿಧಿ ಸಂವತ್ಸರ ಭಾದ್ರಪದ ಶುಕ್ಲದ ಭಾನು
ಬಿದಿಗೆಯಲಿ ಪ್ರವರ ಗೌತಮ ಸಂಗಮಾ
ನಿಧಿಯಲಿ ವಿಜಯವಿಠ್ಠಲನಂಘ್ರಿಯುಗಳವನು
ಹೃದಯದಲಿ ಇಟ್ಟು ದೇಹವ ತ್ಯಾಗಮಾಡ್ದೆ ||5||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.