← ಶ್ರೀಕೃಷ್ಣ

ಯಾಕೆ ಜೀವನವೆ ನೀ ಶ್ರೀಕಾಂತನನು

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ |
ವಿವೇಕವೇ ನಿನಗಿದು ?
ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು |
ಬೇಕಾದ ವರವೀವ ಭಕ್ತವತ್ಸಲ ದೊರೆಯಾ

ಲೇಸಾದರು ವಿಷಯದಾಸೆಯ ಬಿಡಲೊಲ್ಲಿ |
ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು ||
ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- |
ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ ||1||

ಸತಿ-ಸುತರನು ನೀನು ಸಲಹುವೆನೆನುತಲಿ |
ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ ||
ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ |
ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ||2||

ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ |
ಕೆಟ್ಟು ಪೋಗುವಿ ಯಾತಕೋ ಜೀವನವೆ ||
ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ |
ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.