← ಶ್ರೀಕೃಷ್ಣ

ಯಾಕೆ ಪುಟ್ಟಿಸಿದಿ ಇನ್ನು ಎಲೊ ಹರಿಯೆ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಯಾಕೆ ಪುಟ್ಟಿಸಿದಿ ಇನ್ನು ಎಲೊ ಹರಿಯೆ |
ಲೋಕ ದೊಳಗನುಗಾಲ ತಿರಿದು ತಿಂಬುವಂತೆ ಮಾಡಿ

ಒಡಲಿಗಾಗಿ ಒಬ್ಬನ ಸಂಗಡ ಹೋಗಲು |
ಕೊಡುವವನು ಇಲ್ಲೆಂದು ಪರಿಹರಿಸುವ ||
ಸುಡು ಈ ಶರೀರವ ಬಳಲಲಾರೆನೊ ವಿಷದ,
ಮಡುವನಾದರು ಧುಮುಕಿ ಮರಣವಾಗುವೆ ರಂಗಾ ||1||

ಪ್ರತಿದಿನವೂ ಅನ್ನ ಕೊಡುವವನ ಬಾಗಿಲಿಗ್ಹೋಗೆ |
ಹುತವಾಗುವನು ಎನ್ನ ನೋಡುತಲಿ ||
ಕ್ಷಿತಿಯೊಳಗೆ ಈ ಪರಿ ಬದುಕಿ ಇಹೋದಕಿಂತ |
ಹತವಾಗಬಹುದಂಬಿನ ಮೊನೆಗೆ ಬಿದ್ದು ರಂಗಾ ||2||

ಎಲ್ಲಿ ಬೇಡಿದಲ್ಲವೆಂಬೋ ಸೊಲ್ಲಿಲ್ಲಿದೇ |
ಒಲ್ಲೆನೋ ಸಾಕು ಈ ನರ ಜನ್ಮವು
ಬಲ್ಲಿದ ಬಲ್ಲಿದರರಸ ಸಿರಿ ವಿಜಯವಿಠ್ಠಲ ನಿ- |
ನ್ನಲ್ಲಿ ದೂತರ ಸಂಗದಲ್ಲಿ ಸುಖಬಡಿಸೊ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.