← ಶ್ರೀಕೃಷ್ಣ

ಯಾಚಕರು ಪರರ ಸಂಕಟ ಬಲ್ಲರೆಣ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಯಾಚಕರು ಪರರ ಸಂಕಟ ಬಲ್ಲರೆಣ
ಭೂ ಚಕ್ರದಲಿ ಗಾಳಿಯಂತೆ ತಿರುಗಲು ಬಿಡರು

ಕಾಪೀನವನು ಧರಿಸಿ ಮುಖವ ಡೊಂಕನೆ ಮಾಡಿ
ಕೋಪದಿಂದಲಿ ಕರವನೆತ್ತಲ್ಯಾಕೆ
ಪಾಪಿ ಕೂಪವ ಮೀರಿ ಸಮುದ್ರವನು ನೆರೆ ದಾಟಿ
ರೂಪಾಂತರದಿ ಮನೆ ಮನೆಯ ಪೊಕ್ಕರು ಬಿಡರು ||1||

ವಿಷವ ಸವಿದುಂಡು ಮಹ ಮಡುವ ಪ್ರವೇಶಿಸಿ
ವಸುಧೆಯೊಳು ಬೇಡಿ ಕಿರಿತಂದುಂಡರು
ಬೆಸಬೆಸನೆ ವನವನವ ತಿರುಗಿ ಅe್ಞÁತದಲಿ
ವಸಿಸಿ ಮಾನಸದಿ ಗೃಹಕರ್ಮ ಮಾಡಲಿ ಬಿಡರು ||2||

ಜುಟ್ಟು ಜನಿವಾರವನು ಕಿತ್ತುಕೊಂಡು ಯತಿಯಾಗಿ
ಕಟ್ಟ ಕಡೆಯಲಿ ಗೃಹಸ್ಥ ಧರ್ಮ ತೊರೆದು
ಹುಟ್ಟುಗತಿ ಯಿಲ್ಲೆನಗೆ ಕೃಷ್ಣ ಕೃಷ್ಣ ವಿಜಯ
ವಿಠ್ಠಲನ ಪಾದಕೆ ಮೊರೆಯಿಟ್ಟರು ಬಿಡರು ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.