← ಶ್ರೀನರಸಿಂಹ

ಸವಿದುಣ್ಣ ಬಾರಯ್ಯ

📂 ಶ್ರೀನರಸಿಂಹ
✍️ ವಿಜಯದಾಸ
🏷️ ಕೀರ್ತನೆಗಳು
ಸವಿದುಣ್ಣ ಬಾರಯ್ಯ ಸಾರಾಭೋಕ್ತಾ
ಪವನಾಂತರ್ಗತ ಕಪಿಲಾತ್ಮ ನರಸಿಂಗಾ

ಉಪ್ಪು ಉಪ್ಪಿನಕಾಯಿ ಪತ್ರ ಶಾಖ ಸೂಪ
ಒಪ್ಪುವ ಸಂಡಿಗೆ ವ್ಯಂಜನಗಳು
ಇಪ್ಪವು ನಿರುಋತಿ ಪ್ರಾಣ ಮಿತ್ರ ಶೇಷ
ಸರ್ಪವೈರಿ ದಕ್ಷ ಲೋಕೇಶನಲ್ಲಿಗೆ ||1||

ಅನ್ನ ಮಂಡಿಗೆ ತೈಲ ಪಕ್ವಂಗಳು ಪರ
ಮಾನ್ನ ಭಕ್ಷ ತುಪ್ಪ ಹುಳಿ ಪದಾರ್ಥ
ಮುನ್ನೆ ಚಂದ್ರ ಬೊಮ್ಮ ಜಯಂತರೈ ಸೂರ್ಯ
ಕನ್ಯ ಲಕುಮಿದೇವಿ ಪರ್ವತ ಸುತಿ ಇರೆ||2||

ಕ್ಷೀರ ನವನೀತಧಿಕಾರಣಾಮ್ಲ
ಚಾರು ಉದ್ದಿನ ಭಕ್ಷ ಕಟು ದ್ರವ್ಯ ಪಾ
ವಾರಿಜಾಸನ ರಾಣಿ ವಾಯು ಸೋಮ
ಮಾರ ವೈರಿ ಧರ್ಮ ಸ್ವಾಯಂಭುವಂಗಳು ಅಲ್ಲಿ ಹಾಕಿರೆ ||3||

ಇಂಗು ಯಾಲಕ್ಕಿ ಸಾಸಿವೆಯಿಂದ ವೊಪ್ಪುತಾ
ಬಂಗಾರ ಪಾತ್ರಿಯೊಳಗೆ ತಂದಿಡೆ
ಪೊಂಗಳಸದಲ್ಲಿ ಸ್ವಾದೋದಕ ಇಡೆ
ಅಂಗಜಾ ದುರ್ಗಿಯ ಚಂದ್ರಮಸುತನಿರೆ ||4||

ವೀಳ್ಯವ ಕೈಕೊಳೊ ಗಂಗಾಜನಕ ಹರಿ
ಅಲ್ಲಲ್ಲಿಗೆ ನಿನ್ನ ರೂಪವುಂಟು
ಬಲ್ಲಿದಾ ವಿಜಯವಿಠ್ಠಲರೇಯ ಎನಗಿದೆ
ಸಲ್ಲೊದೆ ಸರಿ ಲೇಶವಾಪೇಕ್ಷದವನಲ್ಲ||5||
← ಶ್ರೀನರಸಿಂಹ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.