← ವಚನಗಳು

ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು,
ಆಲಿಸದಿರ್ದಡೆ ಮಾಣು.
ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು,

ನೋಡದಿರ್ದಡೆ ಮಾಣು.
ನಿನಗಿದು ವಿಧಿಯೆ ?

ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ?

ಮನವೆಳಸಿ ಮಾರುವೋಗಿ ಮರೆವೊಕ್ಕಡ
ಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?ಆಲಿಸದಿರ್ದಡೆ ಮಾಣು.
ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು,
ನೋಡದಿರ್ದಡೆ ಮಾಣು.
ನಿನಗಿದು ವಿಧಿಯೆ ?

ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ?

ಮನವೆಳಸಿ ಮಾರುವೋಗಿ ಮರೆವೊಕ್ಕಡೆಕೊಂಬ
ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.