← ವಚನಗಳು

ಅಂಗವಿಕಾರಸಂಗವ ಮರೆದು,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅಂಗವಿಕಾರಸಂಗವ ಮರೆದು,
ಲಿಂಗವನೊಡಗೂಡುತಿಪ್ಪವರ ತೋರಾ ಎನಗೆ.

ಕಾಮವಿಕಾರಕತ್ತಲೆಯಳಿದು,
ಭಕ್ತಿಪ್ರಾಣವಾಗಿಪ್ಪವರ ತೋರಾ ಎನಗೆ.

ತ್ರಿಕರಣ ಶುದ್ಧವಾಗಿ ನಿಮ್ಮ ನೆರೆ ನಂಬಿದಸದ್ಭಕ್ತರ
ತೋರಾ ಎನಗೆ ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.