← ವಚನಗಳು

ಅಯ್ಯಾ, ಚಿದಂಗ ಚಿದ್ಘನಲಿಂಗ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅಯ್ಯಾ, ಚಿದಂಗ ಚಿದ್ಘನಲಿಂಗ
ಶಕ್ತಿ ಭಕ್ತಿ ಹಸ್ತ ಮುಖ ಪದಾರ್ಥ ಪ್ರಸಾದ

ಎಂಬಿವಾದಿಯಾದ ಸಮಸ್ತ ಸಕೀಲಂಗಳ ನೆಲೆ ಕಲೆಯರಿಯದೆ,
ಜಿಹ್ವಾಲಂಪಟಕ್ಕೆ ಆಹ್ವಾನಿಸಿ, ಗುಹ್ಯಾಲಂಪಟಕ್ಕೆ ವಿಸರ್ಜಿಸಿ,
ಸಕಲೇಂದ್ರಿಯಮುಖದಲ್ಲಿ ಮೋಹಿಯಾಗಿ,

ಸದ್ಗುರುಕರುಣಾಮೃತರಸ ತಾನೆಂದರಿಯದೆ
ಬರಿದೆ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ

ಗುರುಚರಪರವೆಂದು ಬೊಗಳುವ ಕುನ್ನಿಗಳ ನೋಡಿ
ಎನ್ನ ಮನ ಬೆರಗು ನಿಬ್ಬೆರಗು ಆಯಿತ್ತಯ್ಯಾ,ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.