← ವಚನಗಳು
ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,
ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,
ದೇವಾಂಗವನುಟ್ಟೆನೆಲೆ ಪುರುಷ ಬಾರಾ,
ಪುರುಷ ರತ್ನವೆ ಬಾರಾ.
ನಿನ್ನ ಬರವೆನ್ನ ಅಸುವಿನ ಬರವಾದುದೀಗ,
ಬಾರಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ,ನೀನು
ಬಂದಹನೆಂದು ಬಟ್ಟೆಯ ನೋಡಿ ಬಾಯಾರುತಿರ್ದೆನು.
ದೇವಾಂಗವನುಟ್ಟೆನೆಲೆ ಪುರುಷ ಬಾರಾ,
ಪುರುಷ ರತ್ನವೆ ಬಾರಾ.
ನಿನ್ನ ಬರವೆನ್ನ ಅಸುವಿನ ಬರವಾದುದೀಗ,
ಬಾರಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ,ನೀನು
ಬಂದಹನೆಂದು ಬಟ್ಟೆಯ ನೋಡಿ ಬಾಯಾರುತಿರ್ದೆನು.