← ವಚನಗಳು

ಅನುತಾಪದೊಡಲಿಂದೆ ಬಂದ ನೋವನುಂಬವರು

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅನುತಾಪದೊಡಲಿಂದೆ ಬಂದ ನೋವನುಂಬವರು
ಒಡಲೊ, ಪ್ರಾಣವೊ, ಆರು ಹೇಳಾ

ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ
ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ ?

ಚೆನ್ನಮಲ್ಲಿಕಾರ್ಜುನಯ್ಯಾ,
ಎನ್ನ ನೊಂದ ನೋವು, ಬೆಂದ ಬೇಗೆ,ನಿಮ್ಮ ತಾಗದೆ ಹೋಹುದೆ ಅಯ್ಯಾ
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.