← ವಚನಗಳು

ಆತುರದ ಧ್ಯಾನದಿಂದ ಧಾವತಿಗೊಂಡೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಆತುರದ ಧ್ಯಾನದಿಂದ ಧಾವತಿಗೊಂಡೆ ;
ಜ್ಯೋತಿರ್ಲಿಂಗವ ಕಾಣಿಸಬಾರದು.
ಮಾತಿನ ಮಾಲೆಗೆ ಸಿಲುಕುವನಲ್ಲ ;
ಧಾತುಗೆಡಿಸಿ ಮನವ ನೋಡಿ ಕಾಡುವನು.
ಆತುಮನಂತರ ಪರವನರಿದಡೆ ಆತನೆ ಯೋಗಿ ;
ಆತನ ಪಾದಕ್ಕೆ ಶರಣೆಂಬೆನಯ್ಯಾಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.