← ವಚನಗಳು

ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ,
ಆನು ಬೆಂದ ಬೇಗೆಯನರಿಯದೆ ಕೆಟ್ಟೆನಯ್ಯಾ,
ಆನು ಕೆಟ್ಟ ಕೇಡನೇನೆಂದು ಹವಣಿಸುವೆನಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ
ನೋವ ಕಂಡು ಆನು ಬೆಂದೆನಯ್ಯಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.