← ವಚನಗಳು

ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ,
ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವಾ.
ತೂರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ
ಬೆರಗಾಗಿ ನಿಲಲಾರೆನವ್ವಾ.
ಆರವಸ್ಥೆ ಕರ ಹಿರಿದು ಎಲೆ ತಾಯೆ.
ಗಿರಿ ಬೆಂದು ತರುವುಳಿದು ಹೊನ್ನರಳೆಯ ಮರನುಲಿವಾಗ
ಹಿರಿಯತನಗೆಡಿಸಿ ನೆರೆವೆನು ಚೆನ್ನಮಲ್ಲಿಕಾರ್ಜುನನ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.