← ವಚನಗಳು

ಉಡುವೆ ನಾನು ಲಿಂಗಕ್ಕೆಂದು,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಉಡುವೆ ನಾನು ಲಿಂಗಕ್ಕೆಂದು,
ತೊಡುವೆ ನಾನು ಲಿಂಗಕ್ಕೆಂದು,
ಮಾಡುವೆ ನಾನು ಲಿಂಗಕ್ಕೆಂದು,
ನೋಡುವೆ ನಾನು ಲಿಂಗಕ್ಕೆಂದು,
ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ.
ಮಾಡಿಯೂ ಮಾಡದಂತಿಪ್ಪೆ ನೋಡಾ.
ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಡನೆ
ಹನ್ನೊಂದಾಗಿಪ್ಪುದನೇನ ಹೇಳುವೆನವ್ವಾ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.