← ವಚನಗಳು

ಎಲ್ಲರ ಗಂಡರ ಶೃಂಗಾರದ ಪರಿಯಲ್ಲ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ,
ಎನ್ನ ನಲ್ಲನ ಶೃಂಗಾರದ ಪರಿ ಬೇರೆ.
ಶಿರದಲ್ಲಿ ಕಂಕಣ, ಉರದಮೇಲಂದುಗೆ, ಕಿವಿಯಲ್ಲಿ ಹಾವುಗೆ,
ಉಭಯ ಸಿರಿವಂತನ ಮೊಳಕಾಲಲ್ಲಿ ಜಳವಟ್ಟಿಗೆ.
ಉಂಗುಟದಲ್ಲಿ ಮೂಕುತಿ - ಇದು ಜಾಣರಿಗೆ ಜಗುಳಿಕೆ. ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.