← ವಚನಗಳು

ಎಲೆ ಅಣ್ಣಾ ಅಣ್ಣಾ, ನೀವು ಮರುಳಲ್ಲಾ ಅಣ್ಣಾ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಎಲೆ ಅಣ್ಣಾ ಅಣ್ಣಾ, ನೀವು ಮರುಳಲ್ಲಾ ಅಣ್ಣಾ,
ಎನ್ನ ನಿನ್ನಳವೆ ?
ಹದಿನಾಲ್ಕು ಲೋಕವ ನುಂಗಿದ ಕಾಮನ ಬಾಣದ ಗುಣ
ಎನ್ನ ನಿನ್ನಳವೆ ?
ವಾರುವ ಮುಗ್ಗಿದಡೆ, ಮಿಡಿಹಯ ಹೊಯ್ವರೆ ?
ಮುಗ್ಗಿದ ಭಂಗವ ಮುಂದೆ ರಣದಲ್ಲಿ ತಿಳಿವುದು.
ನಿನ್ನ ನೀ ಸಂವರಿಸಿ ಕೈದುವ ಕೊಳ್ಳಿರಣ್ಣಾ, ಚೆನ್ನಮಲ್ಲಿಕಾರ್ಜುನನೆಂಬ ಹಗೆಗೆ ಬೆಂಗೊಡದಿರಣ್ಣಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.