← ವಚನಗಳು

ಕಂಗಳೊಳಗೆ ತೊಳಗಿ ಬೆಳಗುವ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಂಗಳೊಳಗೆ ತೊಳಗಿ ಬೆಳಗುವ
ದಿವ್ಯ ರೂಪವ ಕಂಡು ಮೈಮರೆದೆನವ್ವಾ.
ಮಣಿಮುಕುಟದ ಫಣಿಕಂಕಣದ ನಗೆಮೊಗದ
ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವಾ.
ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ, ಆನು ಮದುವಣಿಗಿ ಕೇಳಾ ತಾಯೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.