← ವಚನಗಳು

ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ
ಕಾಯಕ ನಿವೃತ್ತಿಯಾಗಬೇಕು.
ಅಂಗದಲಳವಟ್ಟಲಿಂಗ,
ಲಿಂಗೈಕ್ಯಂಗೆ ಅಂಗಸಂಗ ಮತ್ತೆಲ್ಲಿಯದೊ ?
ಮಹಾಘನವನರಿತ ಮಹಾಂತಂಗೆ ಮಾಯವೆಲ್ಲಿಯದೊ ಚೆನ್ನಮಲ್ಲಿಕಾರ್ಜುನಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.