← ವಚನಗಳು

ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು.
ಒಳಗೂ ಕಲ್ಯಾಣ ಹೊರಗೂ ಕಲ್ಯಾಣ.
ಇದರಂತುವನಾರು ಬಲ್ಲರಯ್ಯಾ ?
ನಿಮ್ಮ ಸತ್ಯ ಶರಣರ ಸುಳುಹು ತೋರುತ್ತಿದೆಯಯ್ಯಾ.
ನಿಮ್ಮ ಶರಣ ಬಸವಣ್ಣನ ಕಾಂಬೆನೆಂಬ ತವಕವೆನಗಾಯಿತ್ತು ಕೇಳಾ ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.