← ವಚನಗಳು

ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ?

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕೈಯ ಧನವ ಕೊಂಡಡೆ, ಮೈಯ ಭಾಷೆಯ ಕೊಳಬಹುದೆ ?
ಉಟ್ಟ ಉಡುಗೆಯ ಸೆಳೆದುಕೊಂಡರೆ,
ಮುಚ್ಚಿ ಮುಸುಕಿದ ನಿರ್ವಾಣವ ಸೆಳೆಯಬಹುದೆ ?
ನೋಡುವಿರಿ ಎಲೆ ಅಣ್ಣಗಳಿರಾ,
ಕುಲವಳಿದು ಲವಳಿದು ಭವಗೆಟ್ಟು ಭಕ್ತೆಯಾದವಳ.
ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ, ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದುಲವುಳಿದವಳನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.