← ವಚನಗಳು

ಚಂದನವ ಕಡಿದು ಕೊರೆದು ತೇದಡೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಚಂದನವ ಕಡಿದು ಕೊರೆದು ತೇದಡೆ
ನೊಂದೆನೆಂದು ಕಂಪ ಬಿಟ್ಟಿತ್ತೆ ?
ತಂದು ಸುವರ್ಣವ ಕಡಿದೊರೆದಡೆ
ಬೆಂದು ಕಳಂಕ ಹಿಡಿಯಿತ್ತೆ ?
ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ,
ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ ?
ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು
ನಿಮಗೇ ಹಾನಿ.
ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ,
ನೀ ಕೊಂದಡೆಯೂ ಶರಣೆಂಬುದ ಮಾಣೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.