← ವಚನಗಳು

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ
ತನ್ನ ನೆಳಲಿಂಗೆ ತಾನೆ ಹೋರಿ ಸಾವಂತೆ
ಆನೆಯ ಗತಿ ಆನೆಯ ಮತಿ.
ಆನೆಯಹುದು, ಆನೆಯಲ್ಲ, ಅದನೇನೆಂಬೆ ?
ನೀನೆನ್ನ ಕರಸ್ಥಲದಲ್ಲಿ ಸಿಲ್ಕಿದೆಯಾಗಿ
ನೀ ನಾನೆಂಬ ಭ್ರಾಂತೇಕೆ ? ನಾನು ನೀನಲ್ಲದ ತೆರಹಿಲ್ಲ,
ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.