← ವಚನಗಳು

ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ
ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು
ಆಧಾರ ತೊಡಗಿ ಆe್ಞಚಕ್ರವೇ ಕಡೆಯಾಗುಳ್ಳ
ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು.

ಆe್ಞಚಕ್ರದತ್ತಣಿಂದೆ ಊಧ್ರ್ವ ಭಾಗವಾದ
ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ
ಸಹಸ್ರದಳ ಕಮಲವನು ಭಾವಿಸುವುದು.

ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ
ಚಂದ್ರಮಂಡಲವನು ಧ್ಯಾನಿಸುವುದು.

ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ
ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು.

ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು
ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು
ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ
ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.