← ವಚನಗಳು

ನಚ್ಚುಗೆ ಮನ ನಿಮ್ಮಲ್ಲಿ, ಮಚ್ಚುಗೆ ಮನ ನಿಮ್ಮಲ್ಲಿ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ನಚ್ಚುಗೆ ಮನ ನಿಮ್ಮಲ್ಲಿ, ಮಚ್ಚುಗೆ ಮನ ನಿಮ್ಮಲ್ಲಿ,
ಸಲುಗುಗೆ ಮನ ನಿಮ್ಮಲ್ಲಿ, ಸೋಲುಗೆ ಮನ ನಿಮ್ಮಲ್ಲಿ,
ಅಳಲುಗೆ ಮನ ನಿಮ್ಮಲ್ಲಿ, ಬಳಲುಗೆ ಮನ ನಿಮ್ಮಲ್ಲಿ,
ಕರಗುವೆ ಮನ ನಿಮ್ಮಲ್ಲಿ, ಕೊರಗುಗೆ ಮನ ನಿಮ್ಮಲ್ಲಿ.
ಎನ್ನ ಪಂಚೇಂದ್ರಿಯಂಗಳು ಕಬ್ಬುನ ಉಂಡ ನೀರಿನಂತೆ ನಿಮ್ಮಲ್ಲಿ ಬೆರಸುಗೆ ಚೆನ್ನಮಲ್ಲಿಕಾರ್ಜುನಯ್ಯಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.