← ಶ್ರೀಕೃಷ್ಣ
ಮನ ಶುದ್ಧಿಯಿಲ್ಲದವಗೆ
ಮನ ಶುದ್ಧಿಯಿಲ್ಲದವಗೆ ಮಂತ್ರದ ಫಲವೇನು |
ತನು ಶುದ್ಧಿಯಿಲ್ಲದವಗೆ ತೀರ್ಥದ ಫಲವೇನು ||
ತನು ಶುದ್ಧಿಯಿಲ್ಲದವಗೆ ತೀರ್ಥದ ಫಲವೇನು ||
ಮಿಂದಲ್ಲಿ ಫಲವೇನು ಮೀನು ಮೊಸಳೆಯಂತೆ
ನಿಂದಲ್ಲಿ ಫಲವೇನು ಶ್ರೀಶೈಲದ ಕಾಗೆಯಂತೆ |
ನಿಂದಲ್ಲಿ ಫಲವೇನು ಶ್ರೀಶೈಲದ ಕಾಗೆಯಂತೆ |
ಹೊರಗೆ ಮಿಂದು ಒಳಗೆ ಮೀಯದವರ ಕಂಡು
ಬೆರಗಾಗಿ ನಗುತ್ತಿದ್ದ ಪುರಂದರವಿಟ್ಠಲ ||
ಬೆರಗಾಗಿ ನಗುತ್ತಿದ್ದ ಪುರಂದರವಿಟ್ಠಲ ||