← ವಚನಗಳು

ನೀನಿಕ್ಕಿದ ಸರಿದೊಡಕನಾರು ಬಿಡಿಸಬಲ್ಲರಯ್ಯಾ ?

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ನೀನಿಕ್ಕಿದ ಸರಿದೊಡಕನಾರು ಬಿಡಿಸಬಲ್ಲರಯ್ಯಾ ?
ನೀನಿಕ್ಕಿದ ಕಟ್ಟನಾರು ಕಳೆಯಬಲ್ಲರಯ್ಯಾ ?
ನೀ ಸೀಳಿದ ರೇಖೆಯನಾರು ಮೀರಬಹುದಯ್ಯಾ ?
ಚೆನ್ನಮಲ್ಲಿಕಾರ್ಜುನಯ್ಯಾ,
ನೀನು ಕಳುಹಿದ ಸೆರೆಗೆ ಮಾರುವೋಗದಿರ್ದಡೆ ಎನ್ನಿಚ್ಚೆಯ ಅಯ್ಯಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.