← ವಚನಗಳು

ಪುರುಷನ ಮುಂದೆ ಮಾಯೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಪುರುಷನ ಮುಂದೆ ಮಾಯೆ
ಸ್ತ್ರೀಯೆಂಬ ಅಭಿಮಾನವಾಗಿ ಕಾಡುವುದು.
ಸ್ತ್ರೀಯ ಮುಂದೆ ಮಾಯೆ
ಪುರುಷನೆಂಬ ಅಭಿಮಾನವಾಗಿ ಕಾಡುವುದು.
ಲೋಕವೆಂಬ ಮಾಯೆಗೆ ಶರಣಚಾರಿತ್ರ್ಯ
ಮರುಳಾಗಿ ತೋರುವುದು.
ಚೆನ್ನಮಲ್ಲಿಕಾರ್ಜುನನೊಲಿದ ಶರಣಂಗೆ ಮಾಯೆಯಿಲ್ಲ, ಮರಹಿಲ್ಲ, ಅಭಿಮಾನವೂ ಇಲ್ಲ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.