← ವಚನಗಳು

ಪೃಥ್ವಿ ಪೃಥ್ವಿಯ ಕೂಡದ ಮುನ್ನ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಪೃಥ್ವಿ ಪೃಥ್ವಿಯ ಕೂಡದ ಮುನ್ನ,
ಅಪ್ಪು ಅಪ್ಪುವ ಕೂಡದ ಮುನ್ನ,
ತೇಜ ತೇಜವ ಕೂಡದ ಮುನ್ನ,
ವಾಯು ವಾಯುವ ಕೂಡದ ಮುನ್ನ,
ಆಕಾಶ ಆಕಾಶವ ಕೂಡದ ಮುನ್ನ
ಪಂಚೇಂದ್ರಿಯಂಗಳೆಲ್ಲ ಹಂಚುಹರಿಯಾಗದ
ಮುನ್ನ ಚೆನ್ನಮಲ್ಲಿಕಾರ್ಜುನಂಗೆ ಶರಣೆನ್ನಿರೆ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.