← ವಚನಗಳು

ಪಾತಾಳವಿತ್ತಿತ್ತ, ಪಾದಂಗಳತ್ತತ್ತ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಪಾತಾಳವಿತ್ತಿತ್ತ, ಪಾದಂಗಳತ್ತತ್ತ,
ದಶದಿಕ್ಕು ಇತ್ತಿತ್ತ, ದಶಭುಜಂಗಳತ್ತತ್ತ,
ಬ್ರಹ್ಮಾಂಡವಿತ್ತಿತ್ತ, ಮಣಿಮುಕುಟವತ್ತತ್ತ,
ಚೆನ್ನಮಲ್ಲಿಕಾರ್ಜುನಯ್ಯಾ, ನೀವೆನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಲ್ಲಾ ಲಿಂಗವೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.