← ವಚನಗಳು

ಪ್ರಾಣ ಲಿಂಗವೆಂದರಿದಬಳಿಕ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಪ್ರಾಣ ಲಿಂಗವೆಂದರಿದಬಳಿಕ
ಪ್ರಾಣ ಪ್ರಸಾದವಾಯಿತ್ತು.
ಲಿಂಗ ಪ್ರಾಣವೆಂದರಿದಬಳಿಕ
ಅಂಗದಾಸೆ ಹಿಂಗಿತ್ತು.
ಲಿಂಗ ಸೋಂಕಿನ ಸಂಗಿಗೆ ಕಂಗಳೆ ಕರುವಾದವಯ್ಯಾ.
ಚೆನ್ನಮಲ್ಲಿಕಾರ್ಜುನಯ್ಯಾ, ಹಿಂಗದೆ ಅನಿಮಿಷನಾಗಿಹ ಶರಣಂಗೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.