← ವಚನಗಳು

ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.
ಅಣ್ಣಾ, ನಾನು ಹೆಂಗೂಸಲ್ಲ ; ಅಣ್ಣಾ, ನಾನು ಸೂಳೆಯಲ್ಲ.
ಅಣ್ಣಾ, ಮತ್ತೆ ನನ್ನ ಕಂಡು ಕಂಡು ಆರೆಂದು ಬಂದಿರಣ್ಣಾ ?
ಚೆನ್ನಮಲ್ಲಿಕಾರ್ಜುನನಲ್ಲದ ಮಿಕ್ಕಿನ ಪರಪುರುಷನು ನಮಗಾಗದ ಮೋರೆ ನೋಡಣ್ಣಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.