← ವಚನಗಳು

ಬಸವಣ್ಣನ ಮನೆಯ ಮಗಳಾದ ಕಾರಣ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಬಸವಣ್ಣನ ಮನೆಯ ಮಗಳಾದ ಕಾರಣ
ಭಕ್ತಿಪ್ರಸಾದವ ಕೊಟ್ಟನು.
ಚೆನ್ನಬಸವಣ್ಣನ ತೊತ್ತಿನ ಮಗಳಾದ ಕಾರಣ
ಒಕ್ಕಪ್ರಸಾದವ ಕೊಟ್ಟನು.
ಪ್ರಭುದೇವರ ತೊತ್ತಿನ ತೊತ್ತಿನ ಮರಿದೊತ್ತಿನ ಮಗಳಾದ ಕಾರಣ
e್ಞನಪ್ರಸಾದವ ಕೊಟ್ಟನು.
ಸಿದ್ಧರಾಮಯ್ಯನ ಶಿಶುಮಗಳಾದ ಕಾರಣ
ಪ್ರಾಣಪ್ರಸಾದವ ಸಿದ್ಧಿಸಿಕೊಟ್ಟನು.
ಮಡಿವಾಳಯ್ಯನ ಮನೆಯ ಮಗಳಾದ ಕಾರಣ
ನಿರ್ಮಲಪ್ರಸಾದವ ನಿಶ್ಚೈಸಿಕೊಟ್ಟನು.
ಇಂತೀ ಅಸಂಖ್ಯಾತ ಗಣಂಗಳೆಲ್ಲರು
ತಮ್ಮ ಕರುಣದ ಕಂದನೆಂದು ತಲೆದಡಹಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ಶ್ರೀಪಾದಕ್ಕೆ ಯೋಗ್ಯಳಾದೆನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.