← ಶ್ರೀಕೃಷ್ಣ

ಆವ ರೋಗವು ಎನಗೆ

📂 ಶ್ರೀಕೃಷ್ಣ
✍️ ಗೋಪಾಲದಾಸ
🏷️ ಕೀರ್ತನೆಗಳು
🎵 ರಾಗ: ಜಯಜಯವಂತೀ
🥁 ತಾಳ: ಝಪತಾಲ
ಆವ ರೋಗವು ಎನಗೆ ದೇವ ಧನ್ವಂತ್ರಿ |
ಸಾವಧಾನದಿ ಎನ್ನ ಕೈಪಿಡಿದು ನೋಡಯ್ಯ ||
ಹರಿಮೂರ್ತಿಗಳು ಎನ್ನ ಕಂಗಳಿಗೆ ಕಾಣಿಸವು
ಹರಿಯ ಕೀರ್ತನೆಯು ಕೇಳಿಸದು ಕಿವಿಗೆ |
ಹರಿಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆ
ಹರಿಪ್ರಸಾದವ ಜಿಹ್ವೆ ಸವಿಯದಯ್ಯ ||
ಹರಿಪಾದ ಸೇವೆಗೆ ಹಸ್ತಗಳು ಚಲಿಸವು
ಗುರುಹಿರಿಯರಿಂಗೆ ಶಿರ ಬಾಗದು |
ಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವು
ಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ ||
ಅನಾಥಬಂಧು ಗೋಪಾಲವಿಟ್ಠಲರೇಯ
ಎನ್ನ ಭಾಗದ ವೈದ್ಯ ನೀನೆ ನೀನೇ |
ಅನಾದಿಕಾಲದ ಭವರೋಗ ಕಳೆಯಯ್ಯ
ನಾನೆಂದಿಗೂ ಮರೆಯೆ ನಿನ್ನ ಉಪಕಾರ ||‌
← ಶ್ರೀಕೃಷ್ಣ ಗೋಪಾಲದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.