← ವಚನಗಳು

ಮಾಟ ಮದುವೆಯ ಮನೆ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಮಾಟ ಮದುವೆಯ ಮನೆ.
ದಾನಧರ್ಮ ಸಂತೆಯ ಪಸಾರ,
ಸಾಜಸಾಜೇಶ್ವರಿ ಸೂಳೆಗೇರಿಯ ಸೊಬಗು.
ವ್ರತನೇಮವೆಂಬುದು ವಂಚನೆಯ ಲುಬ್ಧವಾಣಿ.
ಭಕ್ತಿಯೆಂಬುದು ಬಾಜಿಗಾರರಾಟ.
ಬಸವಣ್ಣಗೆ ತರ ; ನಾನರಿಯದೆ ಹುಟ್ಟಿದೆ, ಹುಟ್ಟಿ ಹುಸಿಗೀಡಾದೆ.
ಹುಸಿ ವಿಷಯದೊಳಡಗಿತ್ತು, ವಿಷಯ ಮಸಿಮಣ್ಣಾಯಿತ್ತು.
ನಿನ್ನ ಗಸಣೆಯನೊಲ್ಲೆ ಹೋಗಾ, ಚೆನ್ನಮಲ್ಲಿಕಾರ್ಜುನಾ,
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.