← ವಚನಗಳು

ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ,
ಶಿಲೆಗಳೆಲ್ಲಾ ಪರುಷ, ನೆಲವೆಲ್ಲಾ ಅವಿಮುಕ್ತಿಕ್ಷೇತ್ರ.
ಜಲವೆಲ್ಲಾ ನಿರ್ಜರಾಮೃತ, ಮೃಗವೆಲ್ಲಾ ಪುರುಷಾಮೃಗ,
ಎಡಹುವ ಹರಳೆಲ್ಲಾ ಚಿಂತಾಮಣಿ.
ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ,
ನೋಡುತ್ತ ಬಂದು ಕದಳಿಯ ಬನವ ಕಂಡೆ ನಾನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.