← ವಚನಗಳು

ವಾನರಂಗಳಿಗೆ ಭೈತ್ರ ತಪ್ಪಿಬಂದಡೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ವಾನರಂಗಳಿಗೆ ಭೈತ್ರ ತಪ್ಪಿಬಂದಡೆ
ಮುತ್ತು ಮಾಣಿಕ್ಯ ನವರತ್ನದ ಪೆಟ್ಟಿಗೆಗಳು ಸಾರಿದವು.
ಸಾರಿದಡೆ ಆ ವಾನರಂಗಳು ಬಲ್ಲವೆ ಮುತ್ತಿನ ರಕ್ಷೆಯ ?
ನವರತ್ನದ ಪೆಟ್ಟಿಗೆಯ ತೆರದು ನೋಡಿ,
ಕೆಯ್ಕೊಂಡು, ವಾನರಂಗಳು ಮೆದ್ದು ನೋಡಿ,
ಹಣ್ಣಲ್ಲವೆಂದು ಬಿಟ್ಟು ಕಳದವು.
ಲೋಕದೊಳಗೆ ಶರಣ ಸುಳಿದಡೆ,
ಆ ಶರಣನ ನಡೆ ನುಡಿ ಚಾರಿತ್ರವ ಕರ್ಮಿಗಳೆತ್ತ ಬಲ್ಲರು ?
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಶರಣರ ಇರವನು ನಿಮ್ಮ ಶರಣರು
ಬಲ್ಲರಲ್ಲದೆ ಆ ವಾನರನಂತಹ ಮನುಜರೆತ್ತ ಬಲ್ಲರು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.