← ವಚನಗಳು

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು.
ಸಟೆದಿಟವೆಂಬ ಎರಡುವಿಡಿದು ನುಡಿವುದೀ ಲೋಕವೆಲ್ಲವು.
ಸಟೆದಿಟವೆಂಬ ಎರಡುವಿಡಿದು ನಡೆವನೆ ಶರಣನು ?
ಗುರುಲಿಂಗಜಂಗಮದಲ್ಲಿ ಸಟೆಯ ಬಳಸಿದಡೆ
ಅವನು ತ್ರಿವಿಧಕ್ಕೆ ದ್ರೋಹಿ, ಅಘೋರ ನರಕಿ.
ಉಂಬುದೆಲ್ಲ ಕಿಲ್ಬಿಷ, ತಿಂಬುದೆಲ್ಲ ಅಡಗು, ಕುಡಿವುದೆಲ್ಲ ಸುರೆ.
ಹುಸಿಯೆಂಬುದೆ ಹೊಲೆ, ಶಿವಭಕ್ತಂಗೆ ಹುಸಿಯೆಂಬುದುಂಟೆ ಅಯ್ಯಾ ?
ಹುಸಿಯನಾಡಿ ಲಿಂಗವ ಪೂಜಿಸಿದಡೆ ಹೊಳ್ಳ ಬಿತ್ತಿ ಫಲವನರಸುವಂತೆ,
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.