← ವಚನಗಳು
ಹಗಲೆನ್ನೆ ಇರುಳೆನ್ನೆ ಉದಯವೆನ್ನೆ ಅಸ್ತಮಾನವೆನ್ನೆ ;

ಹಿಂದೆನ್ನ ಮುಂದೆನ್ನ, ನೀನಲ್ಲದೆ ಪೆರತೊಂದಹುದೆನ್ನೆ.
ಮನ ಘನವಾದುದಿಲ್ಲವಯ್ಯಾ.
ಕತ್ತಲೆಯಲ್ಲಿ ಕನ್ನಡಿಯ ನೋಡಿ ಕಳವಳಗೊಂಡೆನಯ್ಯಾ.
ನಿಮ್ಮ ಶರಣ ಬಸವಣ್ಣನ ತೇಜದೊಳಗಲ್ಲದೆ ಆನಿನ್ನೆಂದು
ಕಾಂಬೆನು ಹೇಳಾ, ಚೆನ್ನಮಲ್ಲಿಕಾರ್ಜುನಾ.