← ವಚನಗಳು

ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ,
ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ.
ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ.
ನೀವು ಅರಸುವ ಅರಕೆ - ಎನ್ನೊಳಗಾಯಿತ್ತು.
ಎನ್ನ ದೇವ ಚೆನ್ನಮಲ್ಲಿಕಾರ್ಜುನ
ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.