← ವಚನಗಳು

ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ,
ನಗೆಮೊಗದ, ಕಂಗಳ ಕಾಂತಿಯ,
ಈರೇಳುಭುವನವ ಬೆಳಗುವ ದಿವ್ಯಸ್ವರೂಪನ ಕಂಡೆ ನಾನು.
ಕಂಡೆನ್ನ ಕಂಗಳ ಬರ ಹಿಂಗಿತ್ತೆನಗೆ.
ಗಂಡಗಂಡರೆಲ್ಲರ ಹೆಂಡಿರಾಗಿ ಆಳುವ
ಗರುವನ ಕಂಡೆ ನಾನು.
ಜಗದಾದಿ ಶಕ್ತಿಯೊಳು ಬೆರಸಿ ಮಾತನಾಡುವ ಪರಮಗುರು ಚೆನ್ನಮಲ್ಲಿಕಾರ್ಜುನನ ನಿಲವ ಕಂಡು ಬದುಕಿದೆನು
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.