← ವಚನಗಳು

ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು,

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು,
ಕಂಗಳಿಚ್ಛೆಗೆ ಪರವಧುವ ನೆರೆವರು.
ಲಿಂಗಲಾಂಛನಧಾರಿಯಾದಲ್ಲಿ ಫಲವೇನು ಲಿಂಗಪಥವ
ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದಡೆ
ಕೊಂಡ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವಾ.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.