← ವಚನಗಳು

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ,

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾಯಿತ್ತಯ್ಯಾ,
ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.