← ವಚನಗಳು

ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ,

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ,
ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯಾ.
ಹಡೆದುಂಬ ಸೂಳೆಯಂತೆ ಧನವುಳ್ಳವರನರಸಿ ಅರಸಿ ಬೋಧಿಸಲು,
ಪ್ರಾರ್ಥಿಸಲು ಮುನ್ನ ನಾನರಿಯೆನಯ್ಯಾ, ದೊಡ್ಡತನವೆನಗಿಲ್ಲಯ್ಯಾ,
ಅಂಜುವೆನಂಜುವೆ ನಿಮ್ಮ ಪ್ರಮಥರಿಗೆ. ಅನಾಥ ನಾನಯ್ಯಾ, ಕೂಡಲಸಂಗಮದೇವಾ.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.