← ಶ್ರೀಗಣೇಶ

ವಂದಿಸುವದಾದಿಯಲಿ ಗಣನಾಥನ

📂 ಶ್ರೀಗಣೇಶ
✍️ ಪುರಂದರದಾಸ
🏷️ ಕೀರ್ತನೆಗಳು
ವಂದಿಸುವದಾದಿಯಲಿ ಗಣನಾಥನ |
ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು ||
ಹಿಂದೆ ರಾವಣ ತಾನು ವಂದಿಸದೆ ಗಜಮುಖನ
ನಿಂದು ತಪವನು ಕೈದು ವರ ಪಡೆಯಲು
ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ
ತಂದ ವರಗಳನೆಲ್ಲ ಧರೆಗೆ ಇಳಿಸಿದನು ||೧||
ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ
ಮುಂದೆ ಗಣಪನ ಪೂಜಿಸೆಂದು ಪೇಳೆ
ಒಂದೇ ಮನದಲಿ ಬಂದು ಪೂಜಿಸಲು ಗಣನಾಥ
ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ||೨||
ಇಂದು ಜಗವೆಲ್ಲ ಉಮೆನಂದನನ ಪೂಜಿಸಲು
ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು
ತಂದೆ ಸಿರಿಪುರಂದರವಿಠಲನ ಸೇವೆಯೊಳು
ಬಂದ ವಿಘ್ನವ ಕಳೆದಾನಂದವನು ಕೊಡುವ ||೩||
← ಶ್ರೀಗಣೇಶ ಪುರಂದರದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.