← ಶ್ರೀಕೃಷ್ಣ
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ |
ಸುರ ನರರಿಗೆ ಒಲಿದು ಕರುಣವ ಬೀರುವ ದೊರೆಯೆ ಲಾಲಿ ||
ಸುರ ನರರಿಗೆ ಒಲಿದು ಕರುಣವ ಬೀರುವ ದೊರೆಯೆ ಲಾಲಿ ||
ರಾಮ ಲಾಲಿ ಮೇಘಶ್ಯಾಮ ಲಾಲಿ
ರಮಾ ಮನೋಹರ ಅಮಿತ ಸದ್ಗುಣ ಧಾಮ ಲಾಲಿ ||೧||
ರಮಾ ಮನೋಹರ ಅಮಿತ ಸದ್ಗುಣ ಧಾಮ ಲಾಲಿ ||೧||
ಕೃಷ್ಣ ಲಾಲಿ ಸರ್ವೋತ್ಕೃಷ್ಟ ಲಾಲಿ
ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆವ ಸಂತುಷ್ಟ ಲಾಲಿ ||೨||
ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆವ ಸಂತುಷ್ಟ ಲಾಲಿ ||೨||
ರಂಗ ಲಾಲಿ ಮಂಗಳಾಂಗ ಲಾಲಿ
ಗಂಗೆಯ ಪಡೆದ ತುಂಗ ಮಹಿಮ ನರಸಿಂಗ ಲಾಲಿ ||೩||
ಗಂಗೆಯ ಪಡೆದ ತುಂಗ ಮಹಿಮ ನರಸಿಂಗ ಲಾಲಿ ||೩||
ನಂದ ಲಾಲಿ ಗೋಪಿ ಕಂದ ಲಾಲಿ
ಮಂದರ ಗಿರಿಧರ ಮಧುಸೂದನ ಮುಕುಂದ ಲಾಲಿ ||೪||
ಮಂದರ ಗಿರಿಧರ ಮಧುಸೂದನ ಮುಕುಂದ ಲಾಲಿ ||೪||
ಶೂರ ಲಾಲಿ ರಣಧೀರ ಲಾಲಿ
ಮಾರನಯ್ಯ ನಮ್ಮ ವರ ಪುರಂದರವಿಠಲ ಲಾಲಿ ||೫||
ಮಾರನಯ್ಯ ನಮ್ಮ ವರ ಪುರಂದರವಿಠಲ ಲಾಲಿ ||೫||