← ಶ್ರೀಶಿವ

ಅಂತರಂಗದೊಳಗಿಲ್ಲ ಬಹಿರಂಗದೊಳಗಿಲ್ಲ

📂 ಶ್ರೀಶಿವ
✍️ ಅಲ್ಲಮ ಪ್ರಭು
🏷️ ವಚನಗಳು
ಅಂತರಂಗದೊಳಗಿಲ್ಲ ಬಹಿರಂಗದೊಳಗಿಲ್ಲ
ಮತ್ತಾವ ದೆಶೆ ದಿಕ್ಕಿನೊಳಗೆಯೂ ಇಲ್ಲ.
ಏನಾಯಿತ್ತೆಂದರಿಯೆ ಎಂತಾಯಿತ್ತೆಂದರಿಯೆ
ಅದೆಂತೆಂದರೆ:
"ಅಂತಃ ಶೂನ್ಯಂ ಬಹಿಃಶೂನ್ಯಂ ಶೂನ್ಯಂ ಶೂನ್ಯಂ ದಿಶೌ ದಿಶೌ!
ಸರ್ವಶೂನ್ಯಂ ನಿರಾಲಂಬಂ ನಿದ್ರ್ವಂದ್ವಂ ಪರಮಂ ಪದಂ"
ಎಂಬುದಾಗಿ-ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲ.
ಗುಹೇಶ್ವರ ಬಯಲು
← ಶ್ರೀಶಿವ ಅಲ್ಲಮ ಪ್ರಭು ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.