← ಶ್ರೀಕೃಷ್ಣ
ಎನಗೂ ಆಣೆ
ಎನಗೂ ಆಣೆ ರಂಗ ನಿನಗೂ ಆಣೆ |
ಎನಗೂ ನಿನಗೂ ಇಬ್ಬರಿಗೂ ನಿನ್ನ ಭಕ್ತರಾಣೆ ||
ಎನಗೂ ನಿನಗೂ ಇಬ್ಬರಿಗೂ ನಿನ್ನ ಭಕ್ತರಾಣೆ ||
ನಿನ್ನ ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ | ರಂಗ
ಎನ್ನ ನೀ ಕೈಬಿಟ್ಟು ಪೋದರೆ ನಿನಗೆ ಆಣೆ ||
ಎನ್ನ ನೀ ಕೈಬಿಟ್ಟು ಪೋದರೆ ನಿನಗೆ ಆಣೆ ||
ತನುಮನಧನದಲಿ ವಂಚಕನಾದರೆ ಎನಗೆ ಆಣೆ | ರಂಗ
ಮನಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ ||
ಮನಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ ||
ಕಾಕು ಮನುಜರ ಸಂಗವ ಮಾಡಿದರೆನಗೆ ಆಣೆ | ರಂಗ
ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ ||
ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ ||
ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ | ರಂಗ
ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ ||
ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ ||
ಹರಿ ನಿನ್ನಾಶ್ರಯ ಮಾಡದಿದ್ದರೆ ಎನಗೆ ಆಣೆ | ರಂಗ
ಪುರಂದರವಿಟ್ಠಲ ನೀನೊಲಿಯದಿದ್ದರೆ ನಿನಗೆ ||
ಪುರಂದರವಿಟ್ಠಲ ನೀನೊಲಿಯದಿದ್ದರೆ ನಿನಗೆ ||