← ಶ್ರೀಹನುಮಂತ

ಅರಸಿನಂತೆ ಬಂಟನೋ ಹನುಮರಾಯ 

📂 ಶ್ರೀಹನುಮಂತ
✍️ ಕನಕದಾಸ
🏷️ ಕೀರ್ತನೆಗಳು
ಅರಸಿನಂತೆ ಬಂಟನೆಂಬುದ ನೀನುಕುರುಹು ತೋರಿದೆ ಮೂರು ಲೋಕಕೆ ಹನುಮ

ಒಡೆಯನಂಬುಧಿಯೊಳು ಪೊಕ್ಕು ದೈತ್ಯನ ಕೊಂದುತಡೆಯದೆ ಶ್ರುತಿಯನಜಗಿತ್ತನೆಂದುಸಡಗರದಿಂದ ಶರಧಿಯ ದಾಂಟಿ ಮಹಿಜೆ ಪೆ-ರ್ಮುಡಿಯ ಮಾಣಿಕವ ರಾಘವಗಿತ್ತೆ ಹನುಮ ||1||

ಮಂದರಧರ ಗೋವರ್ಧನ ಗಿರಿಯನು ಲೀಲೆ-ಯಿಂದಲಿ ನಿಂದು ನೆಗಹಿದನೆಂದುಸಿಂಧು ಬಂಧನಕೆ ಸಮಸ್ತ ಪರ್ವತಗಳತಂದು ನಳನ ಕೈಯೊಳಗಿತ್ತೆ ಹನುಮ ||2||

ಸಿರಿಧರ ವರ ಕಾಗಿನೆಲೆಯಾದಿಕೇಶವಸುರರಿಗಮೃತವನು ಎರೆದನೆಂದುವರ ಸಂಜೀವನವ ತಂದು ಸೌಮಿತ್ರಿಗಂದುಎರೆದು ಶ್ರೀರಾಮನ ನಿಜದೂತನೆನಿಸಿದೆ ಹನುಮ ||3||
← ಶ್ರೀಹನುಮಂತ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.