← ವೈರಾಗ್ಯ

ಅಹಹ ಮೋಸ ಹೋದೆನಯ್ಯ

📂 ವೈರಾಗ್ಯ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಪಂತುವರಾಳಿ
🥁 ತಾಳ: ಏಕತಾಳ
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ||ಪ||

ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ||ಅ||

ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನು
ಪಾಯದಿಂದ ಹೇಮದಂತೆ ಬಣ್ಣಗಟ್ಟಿ
ಬಾಯ ಬಡಿದು ತಂದು ತಂದು
ಕಾಯ ಕಳೆದೆನಲ್ಲದೆ ||1||

ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದ
ವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತ
ಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆ
ಪಂಚಬಾಣನಯ್ಯ ಕಾಯೊ ಎನ್ನವಗುಣಗಳೆನೆಣಿಸದೆ ||2||

ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆ
ಉಕ್ಕಿ ಸವಿದು ಮನುಜರೊಡನೆ
ಸೊಕ್ಕಿ ದಿನವ ಕಳೆದೆನೆನಗೆ
ತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ ||3||
← ವೈರಾಗ್ಯ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.