← ಶ್ರೀಕೃಷ್ಣ

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಝಂಪೆತಾಳ
ಆರು ಬಲ್ಲರು ಹರಿಹರಾದಿಗಳ ಮಹಿಮೆಯನು ||ಪ||
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ||ಅ||

ಪೌರತ್ರಯವ ಗೆಲ್ವ ಸಮಯದಲಿ ತಪ ಮಾಡಿ
ನಾರಾಯಣಾಸ್ತ್ರವನು ಪಡೆದನೀತ
ಗೌರೀಮನೋಹರನ ಘನತರಾರ್ಚನೆಗೈದು
ಚಾರುತರ ಚಕ್ರವನು ಪಡೆದನಾ ಶೌರಿ ||1||

ಬಲಿ ಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ
ಗಿಲ ಕಾಯ್ದನಚ್ಯುತನು ಅನುಗಾಲದಿ
ಬಲು ಭುಜನು ಬಾಣಾಸುರನ ಗೃಹ ದ್ವಾರವನು
ಬಳಸಿ ಕಾಯ್ದನು ಹರನು ವರವ ತಾನಿತ್ತು ||2||

ಭೋಗಿಶಯನನು ಆಗಿ ಭೋಗಿಭೂಷಣನಾಗಿ
ವಾಗೀಶನಾಗಿ ಸೃಷ್ಟಿ ಸ್ಥಿತಿಲಯ
ಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ
ಕಾಗಿನೆಲೆಯಾದಿಕೇಶವನ ಮಹಿಮೆಯನು ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.